ಮುಖಪುಟ |ನಮ್ಮನ್ನು ಸಂಪರ್ಕಿಸಿ |English

ಕಾರ್ಯಗಳು

ಪ್ರಾದೇಶಿಕ ಆಯುಕ್ತರ ಕಛೇರಿ ಕಾರ್ಯಾನಿರ್ವಹಣೆ

(As per Government order no: ಕಂಇ 09ಬಿಎಂಎಂ 2003 ದಿನಾಂಕ:08-09-2005)

1)  ಸಿಬ್ಬಂದಿಗಳ ನಿರ್ವಹಣೆ, ಅಭಿವೃದ್ಧಿ, ತರಬೇತಿ ಮತ್ತು ಕಂದಾಯ ಇಲಾಖೆಯ ಮಾನವ ಸಂಪನ್ಮೂಲದ ಇತರೆ ವಿಷಯಗಳು.

2)  ಜಿಲ್ಲಾ, ಉಪವಿಭಾಗ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮಮಟ್ಟದ ಕಂದಾಯದ ಲೆಕ್ಕ ಮತ್ತು ಲೆಕ್ಕಪರಿಶೋಧನೆಗಳ ನಿರ್ವಹಣೆ, ವಾರ್ಷಿಕ ತಪಾಸಣೆ, ಅನಿರೀಕ್ಷಿತ ತಪಾಸಣೆ ಹಾಗೂ ಪರಿಶೀಲನೆ ಮತ್ತು ವಾರ್ಷಿಕ ಕಡ್ಡಾಯ ಜಮಾಬಂದಿ ನಡೆಸುವುದು.

3)  ಈ ಹಿಂದೆ ವಿಭಾಗಾಧಿಕಾರಿಗಳು ವಿವಿಧ ನಿಯಮ- ಅಧಿನಿಯಮಗಳಡಿ ಚಲಾಯಿಸುತ್ತಿದ್ದ ಶಾಸನಬದ್ದ (ಮೇಲ್ಮನವಿ ಮತ್ತು ಪನರಾವಲೋಕನ) ಅಧಿಕಾರ;

4)  ನೋಂದಣೆ ಮತ್ತು ಮುದ್ರಾಂಕ ಶುಲ್ಕ, ಭೂ ಮಾಪನ ಮತ್ತು ಭೂ ದಾಖಲೆಗಳ ಕಾರ್ಯ, ಮುಜರಾಯಿ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದ ಕೆಲಸಗಳ ಮೇಲುಸ್ತುವಾರಿ ಅಧಿಕಾರ;

5)  ತಪಾಸಣಾ ಪ್ರಾಧಿಕಾರ:- ಅಧೀನ ಕಛೇರಿಗಳಲ್ಲಿ ಕಾನೂನುಬದ್ಧವಾಗಿ, ಸರ್ಕಾರದ ಸೂಚನೆ/ ಆಜ್ಞೆಯ ಪ್ರಕಾರ ಮತ್ತು ಸ್ಥಾಯೀ ಆದೇಶಗಳನ್ವಯ ಕೆಲಸ/ ಕಾರ್ಯನಿರ್ವಹಣೆ ಆಗುತ್ತಿದೆ ಎಂಬ ಬಗ್ಗೆ ತಪಾಸಣೆ ನಡೆಸುವುದು;

6)  ಪ್ರಕೃತಿ ವಿಕೋಪ ಮತ್ತು ಬರಪರಿಹಾರ ವಿಷಯಗಳ ಮೇಲ್ವಿಚಾರಣೆ, ನಿಯಂತ್ರಣ ಮತ್ತು ಬೆಳೆ ಕಟಾವು ಪ್ರಯೋಗ ಹಾಗೂ ಭೂ ಕಂದಾಯ ಮಾಫಿ ಕಾರ್ಯಗಳ ಮೇಲುಸ್ತುವಾರಿ;

7)  ರಾಜ್ಯದಲ್ಲಿನ ಎಲ್ಲಾ ರೀತಿಯ ಚುನಾವಣೆಗಳ ಮೇಲ್ವಿಚಾರಣೆ;

8)  ಭೂ ಮಂಜೂರಾತಿ, ಭೂ ಸ್ವಾಧಿನ, ಭೂ ಸುಧಾರಣೆ, ಭೂ ಕಂದಾಯ ವಸೂಲಿ, ಭೂ ಮಾಪನ ಮತ್ತು ಕಂದಾಯ ಇಲಾಖೆಯ ಗಣಕೀಕರಣ ಕಾರ್ಯಗಳ ಮೇಲುಸ್ತುವಾರಿ;

9)  ತಮ್ಮ ಕಾರ್ಯಕ್ಷೇತ್ರದಲ್ಲಿ ಬರುವ ಜಿಲ್ಲೆ, ಉಪವಿಭಾಗ ಮತ್ತು ತಾಲ್ಲೂಕು ಕಛೇರಿಗಳಿಗೆ ಹಣಕಾಸು ಬಿಡುಗಡೆ, ವಾರ್ಷಿಕ ಆಯವ್ಯಯ ತಯಾರಿಕೆ, ಶಾಸನ ಸಭೆಗಳ ಪ್ರಶ್ನೆಗಳಿಗೆ ಉತ್ತರಿಸುವುದು ಹಾಗೂ ಶಾಸಕಾಂಗ ಉಪಸಮಿತಿಗಳಿಗೆ ವರದಿ ನೀಡುವುದು ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲಿಸುವುದು;

10)  ತಮ್ಮ ಕಕ್ಷೆಯಲ್ಲಿ ಬರುವ ಎಲ್ಲಾ ಸರ್ಕಾರಿ ಇಲಾಖೆಗಳ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕನಿಷ್ಠ ತಿಂಗಳಿಗೊಮ್ಮೆಯಂತೆ ವಿಮರ್ಷಿಸುವುದು ಹಾಗೂ ಪರಿಶೀಲಿಸುವುದು;

11)  ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವಲ್ಲಿ ಕೊರತೆಯಾದಲ್ಲಿ ಕಾರಣಗಳನ್ನು ಕಂಡುಹಿಡಿದು ಸಕಾಲಿಕ ಪರಿಹಾರೋಪಾಯಗಳನ್ನು ಸೂಚಿಸಿ ಅದರಂತೆ ಕ್ರಮಜರುಗಿಸುವುದು. ಅದಕ್ಕೆ ಸಮಬಂಧಿಸಿದಂತೆ ಇಲಾಖಾ ಮುಖ್ಯಸ್ಥರು ಹಾಗೂ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಜರುಗಿಸುವುದು.

12)  ಇದೂ ಅಲ್ಲದೆ, ಅಭಿವೃದ್ಧಿ ಇಲಾಖೆಗಳ ತಪಾಸಣೆ, ತನಿಖೆ ಹಾಗೂ ಅವಶ್ಯವಿದ್ದಲ್ಲಿ ಪರಿವೀಕ್ಷಣೆ ನಡೆಸುವುದು;

The above is illustrative and not exhaustive.

Designed and Hosted by :
 National Informatics Centre

>> ಮರುಮಾಹಿತಿ
Regional Commissioner Office Mysuru
“ HIGH VIEW ”, Vinoba Road, Opposite Kalamandir,
Mysuru – 57 0005. Karnataka State.
ನಿಬಂಧನೆ ಹಾಗೂ ಷರತ್ತುಗಳು | ಮಾರ್ಗ ನಕ್ಷೆ